ಆಂಬ್ಯುಲೆನ್ಸ್ ನಿರ್ವಹಣೆಗೆ ಹೈಟೆಕ್ ತಂತ್ರಜ್ಞಾನ: ಹೈಕೋರ್ಟ್ ಗೆ ಟೆಂಡರ್ ಪ್ರಕ್ರಿಯೆಗಳ ವರದಿ ಸಲ್ಲಿಕೆ

Update: 2022-07-27 17:12 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.27: ಆಂಬ್ಯುಲೆನ್ಸ್‍ಗಳ ಸುಗಮ ಸಂಚಾರಕ್ಕೆ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ನಿರ್ವಹಣಾವ್ಯವಸ್ಥೆ ಜಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‍ಗೆ ಸರಕಾರವು ವೇಳಾಪಟ್ಟಿ ವರದಿಯನ್ನು ಸಲ್ಲಿಸಿದೆ. 

ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.  

ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ನಿರ್ವಹಣಾ ವ್ಯವಸ್ಥೆ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಸಲ್ಲಿಸಿದ ವೇಳಾಪಟ್ಟಿಯ ವರದಿಯನ್ನು ಸರಕಾರಿ ಪರ ವಕೀಲರು ಪೀಠಕ್ಕೆ ಸಲ್ಲಿಸಿದರು. 

ವರದಿಯನ್ನು ಮಾನ್ಯ ಮಾಡಿದ ನ್ಯಾಯಪೀಠವು ಟೆಂಡರ್ ಪ್ರಕ್ರಿಯೆಯ ಪ್ರಗತಿ ವರದಿಯನ್ನು ಮುಂದಿನ ವಿಚಾರಣೆ ವೇಳೆಗೆ ಸಲ್ಲಿಸಬೇಕೆಂದು ಸರಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News