ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಸೆರೆ

Update: 2022-07-27 17:45 GMT

ಪಡುಬಿದ್ರೆ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಪಡುಬಿದ್ರೆ ಪೊಲೀಸರು ಬಂಧಿಸಿ ಪೊಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಹೆಜಮಾಡಿ ಆಲಡೆ ಬಳಿ ನಿವಾಸಿ ಯಾಸಿನ್ (19) ಬಂಧಿತ ಆರೋಪಿ. ಆತನಿಗೆ ಸಹಕರಿಸಿದ ಆರೋಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನನ್ನು ವಶಪಡಿಸಿಕೊಂಡು ಬಾಲಮಂದಿರಕ್ಕೆ ಸೇರಿಸಲಾಗಿದೆ.

ಕಾಲೇಜಿನ ವಿದ್ಯಾರ್ಥಿನಿಯನ್ನು ಹೆಜಮಾಡಿ ಆಲಡೆ ಬಳಿಯ ಅಪಾರ್ಟ್‌ಮೆಂಟ್‌ನ ಟೆರೇಸ್‌ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಆಟೊ ರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News