ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ; ಜನೋತ್ಸವ ಸಾಧನಾ ಸಮಾವೇಶ ರದ್ದು: ಸಿಎಂ ಬೊಮ್ಮಾಯಿ

Update: 2022-07-28 04:13 GMT

ಬೆಂಗಳೂರು, ಜು.28:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 1 ವರ್ಷ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜುಲೈ 28ರಂದು (ಗುರುವಾರ) ಆಯೋಜಿಸಿದ್ದ ಜನೋತ್ಸವ ಸಾಧನಾ ಸಮಾವೇಶ  ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. 

ಆರ್.ಟಿ ನಗರದ ಖಾಸಗಿ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದರು.

ಪ್ರವೀಣ್ ಹತ್ಯೆ ತೀವ್ರ ನೋವಾಯಿತು. ಈ ಹಿನ್ನೆಲೆಯಲ್ಲಿ ನಾಳೆ ಪಕ್ಷದ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಹಾಗೂ ಸರಕಾರದ ವತಿಯಿಂದ ವಿಧಾನಸೌಧದಲ್ಲಿ ನಿಗದಿಯಾಗಿದ್ದ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.

ಪ್ರವೀಣ್ ಕುಟುಂಸ್ಥರು ಮತ್ತು ಹರ್ಷನ ತಾಯಿ ನೋವನ್ನು ನೋಡಿ ಈ ನಿರ್ಧಾರ ಕೈಗೊಂಡಿದ್ದೇನೆ. ಜನಪರವಾಗಿ ನಾವು ಏನು ಕೆಲಸ ಮಾಡಿದ್ದೇವೆ ಅದು ಜನರಲ್ಲಿ ಆತ್ಮ ವಿಶ್ವಾಸ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ತಿಳಿಸಿದರು.

ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವವಿಸುವವರಿದ್ದರು. 

ನಡ್ಡಾ, ಅರುಣ್ ಸಿಂಗ್ ರಾಜ್ಯ ಭೇಟಿ ರದ್ದು

ಇಂದು ನಿಗದಿಯಾಗಿದ್ದ ಜನೋತ್ಸವ ಸಮಾವೇಶ ರದ್ದು ಹಿನ್ನೆಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ ಕರ್ನಾಟಕ ರಾಜ್ಯ ಭೇಟಿ ರದ್ದುಗೊಳಿಸಲಾಗಿದೆ.

Full View Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News