×
Ad

ನೋಯ್ಡಾ: ಶಾಲೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

Update: 2022-07-28 10:10 IST
Photo:PTI

ನೋಯ್ಡಾ: ನೋಯ್ಡಾದಲ್ಲಿ ಶಾಲೆಗೆ ಹೋಗುತ್ತಿದ್ದ 12 ವರ್ಷದ ಬಾಲಕಿಯ ಮೇಲೆ 20 ವರ್ಷದ ವ್ಯಕ್ತಿಯೊಬ್ಬ ಬುಧವಾರ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.  ಈ ವೇಳೆ  ಆತ ಪೊಲೀಸ್ ಠಾಣೆಗೆ ಹಿಂತಿರುಗುವಾಗ  ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ. ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆ ಗೆ ಇಳಿದಾಗ ಆತನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡಿದ್ದ ಆತನನ್ನು ಮತ್ತೊಮ್ಮೆ ಕಸ್ಟಡಿಗೆ ತೆಗೆದುಕೊಳ್ಳಲಾಯಿತು ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೋಯ್ಡಾ) ರಣವಿಜಯ್ ಸಿಂಗ್ ಹೇಳಿದ್ದಾರೆ.

 ಬಾಲಕಿಯು ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದಾಗ ಆರೋಪಿಯು ಬಾಲಕಿಯನ್ನು ಭೇಟಿಯಾಗಿ ಆಮಿಷವೊಡ್ಡಿಸೆಕ್ಟರ್ 32 ರ ಪ್ರತ್ಯೇಕ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯ  ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಸ್ಥಳೀಯ ಸೆಕ್ಟರ್ 24 ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಶೀಘ್ರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ಈ ಹಿಂದೆಯೂ ಒಂದೆರಡು ಬಾರಿ ಬಾಲಕಿಯೊಂದಿಗೆ ಮಾತನಾಡಿ ಸಲಿಗೆ ಬೆಳೆಸಿಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ತಡೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News