×
Ad

ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ: ಕುಮಾರಸ್ವಾಮಿ ಕಿಡಿ

Update: 2022-07-28 11:29 IST

ಬೆಂಗಳೂರು: 'ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ. ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ತಾಯಿಂದಿರ ಆರ್ತನಾದ ಸರಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ? ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ' ಎಂದು ಕಿಡಿಗಾರಿದ್ದಾರೆ. 

' ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News