ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಸಚಿವ ಡಾ.ಅಶ್ವತ್ಥನಾರಾಯಣ

Update: 2022-07-28 08:53 GMT

ಬೆಂಗಳೂರು:  ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಗುರುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ''ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ. 10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ' ಎಂದು ಅವರು ಹೇಳಿದರು.

'ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ' ಎಂದು ಸಚಿವರು ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News