ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

Update: 2022-07-28 14:10 GMT
ಪ್ರವೀಣ್ ನೆಟ್ಟಾರು

ಪುತ್ತೂರು : ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಿಬ್ಬರನ್ನು ಗುರುವಾರ ಸಂಜೆ  ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆ.11ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ. 

ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಝಾಕಿರ್ ಮತ್ತು ಶಫೀಕ್ ಎಂಬ ಇಬ್ಬರು ಆರೋಪಗಳನ್ನು ಸಂಜೆ ಸುಮಾರು 6 ಗಂಟೆಯ ವೇಳೆಗೆ ಬೆಳ್ಳಾರೆ ಠಾಣೆಯ ಪೊಲೀಸರು ಪುತ್ತೂರಿನ ಪ್ರಧಾನ ಹಿರಿಯ ವ್ಯಾವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶ ಗೌಡ ಆರ್.ಪಿ ಅವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಕೊಲೆ ಪ್ರಕರಣದ ತನಿಖೆಗೆ ಅಗತ್ಯವಿದ್ದಲ್ಲಿ ಪೊಲೀಸರು ಮತ್ತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಿದ್ದಾರೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕಿ ಕವಿತಾ ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News