×
Ad

ರಾಜ್ಯ ಸರಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷರಾಗಿ ಜೈಕುಮಾರ್ ಆಯ್ಕೆ

Update: 2022-07-28 21:24 IST
ಜೈಕುಮಾರ್ 

ಬೆಂಗಳೂರು, ಜು. 28: ‘ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿದ್ದು, ಒಕ್ಕೂಟದ ನೂತನ ರಾಜ್ಯಾಧ್ಯಕ್ಷರಾಗಿ ಎಚ್.ಎಸ್.ಜೈಕುಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಅಭಿಜಿತ್ ಅವರು ಆಯ್ಕೆಯಾಗಿದ್ದಾರೆ.

ಗುರುವಾರ ನಗರದ ಗಾಂಧಿ ಭವನದಲ್ಲಿ ನಡೆದ ಒಕ್ಕೂಟದ ಸರ್ವ ಸದಸ್ಯರ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು, ಕಾರ್ಯಾಧ್ಯಕ್ಷರಾಗಿ ಶೋಭಾ ಲೋಕನಾಗಣ್ಣ, ಕೋಶಾಧ್ಯಕ್ಷರಾಗಿ ವೇದವತಿ, ಉಪಾಧ್ಯಕ್ಷರಾಗಿ ಡಾ.ಎಂ.ವೆಂಕಟೇಶ್ ಅವರು ನೇಮಕಗೊಂಡಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಎಚ್.ಎಸ್.ಜೈಕುಮಾರ್, ಅಭಿಜಿತ್, ವೇದಾವತಿ ಹಾಗೂ ರಂಗನಾಥ ಹವಲ್ದಾರ್ ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಏಳನೆ ವೇತನ ಆಯೋಗ ರಚನೆಗಾಗಿ ಆಗ್ರಹಿಸಿದ್ದು, ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಜೊತೆಗೆ ನೌಕರ ವಿರೋಧಿ ಆಡಳಿತ ಸುಧಾರಣೆ ಆಯೋಗ-2ರ ಶಿಫಾರಸ್ಸುಗಳನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News