×
Ad

ಮಂಗಳೂರು | ನಿಷೇಧಾಜ್ಞೆ ಉಲ್ಲಂಘನೆ: 12 ಮಂದಿ ವಶಕ್ಕೆ

Update: 2022-07-29 11:07 IST
ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್

ಮಂಗಳೂರು, ಜು.29: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಗುರುವಾರ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸುತ್ತಿದ್ದ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುರತ್ಕಲ್ ನಲ್ಲಿ ಕಳೆದ ರಾತ್ರಿ ನಡೆದ ಮುಹಮ್ಮದ್ ಫಾಝಿಲ್ ಕೊಲೆಯ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ರಾತ್ರಿ ವೇಳೆ ಅನಗತ್ಯ ಜನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News