ತೆಲಂಗಾಣ: ಏತ ನೀರಾವರಿ ಯೋಜನೆ ಕಾಮಗಾರಿ ವೇಳೆ ಐವರು ಕಾರ್ಮಿಕರು ಮೃತ್ಯು

Update: 2022-07-29 06:42 GMT
Photo:PTI

ಹೈದರಾಬಾದ್: ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯ ಪಾಲಮುರು ಏತ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಕ್ರೇನ್ ತಂತಿ ತುಂಡಾಗಿ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅವಘಡದಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ ಸರಕಾರದ 35,000 ಕೋ.ರೂ. ವೆಚ್ಚದಲ್ಲಿ ಕೃಷ್ಣಾ ನದಿಗೆ ನಿರ್ಮಿಸುತ್ತಿರುವ ಪಾಲಮುರು ರಂಗಾರೆಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿ ನಾಗರ ಕರ್ನೂಲ್ ಜಿಲ್ಲೆಯ ಕೊಲ್ಲಾಪುರ ಮಂಡಳದ ರೆಗುಮಾನ ಗಡ್ಡಾದಲ್ಲಿ ನಡೆಯುತ್ತಿದೆ.

100 ಅಡಿ ಆಳದ ಸುರಂಗದಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ 7 ಮಂದಿ ಕಾರ್ಮಿಕರು ಕೆಲಸ ಮುಗಿಸಿ ಕ್ರೇನ್ ನಲ್ಲಿ 70 ಅಡಿ ಮೇಲಕ್ಕೆ ಬರುತ್ತಿದ್ದಂತೆ ತಂತಿ ತುಂಡಾಗಿ ಈ ಅವಘಡ ಸಂಭವಿಸಿದೆ.

ಮೃತರನ್ನು ಪೂರ್ವ ಗೋದಾವರಿ ಜಿಲ್ಲೆಯ ಸೀನು(35 ವರ್ಷ), ಜಾರ್ಖಂಡ್ ನ ಭೋಲಾನಾಥ್(40), ಬಿಹಾರ ಮೂಲದ ಪ್ರವೀಣ್, ಕಮಲೇಶ್ ಹಾಗೂ ಸೋನು ಕುಮಾರ್ ಎಂದು ಗುರುತಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News