ಬೆಂಗಳೂರು | ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಪೊಲೀಸ್ ಕಾನ್‍ಸ್ಟೇಬಲ್ ಬಂಧನ

Update: 2022-07-29 14:36 GMT
ಪವನ್ ದ್ಯಾವಣ್ಣನವರ್ - ಬಂಧಿತ ಆರೋಪಿ

ಬೆಂಗಳೂರು, ಜು.29: ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪದಡಿ ಪೊಲೀಸ್ ಕಾನ್‍ಸ್ಟೇಬಲ್ ಓರ್ವನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗೋವಿಂದ ರಾಜನಗರ ಪೊಲೀಸ್ ಠಾಣೆಯ ಕಾನ್ಸ್‍ಟೇಬಲ್ ಪವನ್ ದ್ಯಾವಣ್ಣನವರ್ ಬಂಧಿತ ಆರೋಪಿಯಾಗಿದ್ದು, ಈತನ ಮೇಲೆ ಪೋಸ್ಕೋ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಲಾಗಿದೆ ಎಂದರು.

ಅಪ್ರಾಪ್ತೆಯು ಚಾಮರಾಜನಗರ ಮೂಲದ ಯುವಕನೊಂದಿಗೆ ಪ್ರೀತಿಸಿ ಮನೆ ತೊರೆದು ಬಂದಿದ್ದು, ಜು.27ರಂದು ಪಾರ್ಕ್ ಬದಿ ಓಡಾಡುತ್ತಿದ್ದಳು. ಆಗ ಕರ್ತವ್ಯದಲ್ಲಿದ್ದ ಪವನ್, ಅಪ್ರಾಪ್ತೆಯನ್ನು ಪ್ರಶ್ನಿಸಿದಾಗ ಆಕೆ ಚಾಮರಾಜನಗರಕ್ಕೆ ಹೋಗಬೇಕೆಂದು ಹೇಳಿದ್ದರು ಎನ್ನಲಾಗಿದೆ.

ಆನಂತರ, ಮನೆಗೆ ಕಳುಹಿಸಿಕೊಡುವುದಾಗಿ ನಂಬಿಸಿ ಮನೆಗೆ ಕರೆದೊಯ್ದು ಕಾನ್ಸ್‍ಟೇಬಲ್ ಅತ್ಯಾಚಾರ ಎಸಗಿದ್ದಾರೆ ಎನ್ನುವ ಮಾಹಿತಿ ಗೊತ್ತಾಗಿದೆ. ಸದ್ಯ ಆರೋಪಿ ಕಾನ್ಸ್‍ಟೇಬಲ್‍ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News