ಯುವಕ ಆತ್ಮಹತ್ಯೆ

Update: 2022-07-29 14:56 GMT

ಕೋಟ, ಜು.29: ವೈಯಕ್ತಿಕ ಕಾರಣದಿಂದ ಮನನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.29ರಂದು ಬೆಳಗ್ಗೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತರನ್ನು ರಂಜನ ಜಿ.(33) ಎಂದು ಗುರುತಿಸಲಾಗಿದೆ. ಇವರು ಸೊಸೈಟಿ ಗಳಿಗೆ ಸಾಫ್ಟ್‌ವೇರ್ ಇನ್‌ಸ್ಟಾಲ್ ಮಾಡುವ ಕೆಲಸ ಮಾಡಿಕೊಂಡಿದ್ದು  ವೈಯಕ್ತಿಕ ಕಾರಣಕ್ಕೆ ಮನನೊಂದು ಜೀವನದಲ್ಲಿ ಜುಗುಪ್ಸೆಗೊಂಡು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News