ಸೂಚನಾಫಲಕದಲ್ಲಿ ಶುಲ್ಕಗಳನ್ನು ಪ್ರಕಟಿಸುವಂತೆ ಖಾಸಗಿ ಶಾಲೆಗಳಿಗೆ ಆದೇಶ ಹೊರಡಿಸಿದ ಸರಕಾರ

Update: 2022-07-29 15:14 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.29: ರಾಜ್ಯದಲ್ಲಿ ಖಾಸಗಿ ಕಾಲೇಜುಗಳು ಮುಂದಿನ ಶೈಕ್ಷಣಿಕ ವರ್ಷದ ಶುಲ್ಕಗಳನ್ನು ಲೆಕ್ಕಾಚಾರ ಮಾಡಿ ಡಿಸೆಂಬರ್ ಅಂತ್ಯದ ಒಳಗೆ ಶಾಲೆಯ ಸೂಚನಾ ಫಲಕದಲ್ಲಿ ಹಾಗೂ ಇಲಾಖಾ ವೆಬ್‍ಸೈಟ್‍ನಲ್ಲಿ ಪ್ರಕಟಿಸಬೇಕು. ಮುಂಬರುವ ಶೈಕ್ಷಣಿಕ ವರ್ಷದ ಪ್ರಕಟಿತ ಶುಲ್ಕವನ್ನು ಪಡೆಯಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. 

ರಾಜ್ಯ ಸರಕಾರವು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶುಲ್ಕವನ್ನು ಪಡೆದುಕೊಳ್ಳುವ ನಿಯಮಗಳನ್ನು 2018ರ ಮೇ 18ರಂದು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು. ಹಾಗಾಗಿ 2019-20 ಸಾಲಿನಿಂದ ಶೈಕ್ಷಣಿಕ ವರ್ಷದ ಶುಲ್ಕಗಳನ್ನು ಪ್ರಟಿಸಲು ಆದೇಶಿಸಿದೆ. 

ಖಾಸಗಿ ಶಾಲೆಗಳು ಶುಲ್ಕವನ್ನು ಪಾವತಿಸಿಲ್ಲ ಎಂದು ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಪ್ರಕರಣವನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶದಂತೆ, ಸರಕಾರವು ಖಾಸಗಿ ಶಾಲೆಗಳು ಶುಲ್ಕವನ್ನು ಪ್ರಕಟಿಸುವಂತೆ ತಿಳಿಸಲಾಗಿತ್ತು. ಸರಕಾರದ ಈ ಅಧಿಸೂಚನೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಕೆಲವರು ದಾವೆ ಹೂಡಿದ್ದರು. ಇದನ್ನು ನ್ಯಾಯಾಲಯವು ತಿರಸ್ಕರಿಸಿತ್ತು. 

ಖಾಸಗಿ ಶಾಲೆಗಳ ಶುಲ್ಕದ ಕುರಿತು ನ್ಯಾಯಾಲಯದ ಆದೇಶಗಳನ್ನು ಪರಿಶೀಲಿಸಿ, ಕಾನೂನು ಕೋಶದ ಅಭಿಪ್ರಾಯವನ್ನು ಪಡೆಯಲಾಗಿದೆ. ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಒಂದೇ ಮಾನದಂಡದ ರೂಪದಲ್ಲಿ ಶಾಲೆಗಳಲ್ಲಿ ಬೋಧನಾ ಶುಲ್ಕ ಹಾಗೂ ಇತರೇ ಶುಲ್ಕಗಳನ್ನು ಲೆಕ್ಕಾಚಾರ ಮಾಡಿ ಪಡೆದುಕೊಳ್ಳಲು ಸೂಕ್ತವಾಗಿದೆ. ಹಾಗಾಗಿ ಖಾಸಗಿ ಆಡಳಿತ ಮಂಡಳಿಗಳು 2019-20 ಸಾಲಿನಿಂದ ಜಾರಿಗೆ ಬರುವಂತೆ ಮುಂದಿನ ವರ್ಷದ ಶುಲ್ಕಗಳನ್ನು ಸೂಚನಾಪಲಕದಲ್ಲಿ ಪ್ರಕಟಿಸುವಂತೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News