ಪತ್ರಕರ್ತರ ಮೇಲೆ ಮಾಜಿ ಸ್ಪೀಕರ್.ರಮೇಶ್ ಕುಮಾರ್ ಹಲ್ಲೆ: ಪತ್ರಕರ್ತರ ಸಂಘದ ಆಕ್ರೋಶ

Update: 2022-07-29 16:25 GMT

ಕೋಲಾರ : ಮಾಜಿ ಸ್ಪೀಕರ್. ಕೆ.ಆರ್. ರಮೇಶ್ ಕುಮಾರ್ ಕೋಲಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಇಂದು ಕೋಲಾರ ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ನಡೆದ ಸಿದ್ದರಾಮೋತ್ಸವ ಪೂರ್ವಭಾವಿ ಸಭೆ ಹಾಗೂ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ಸಭೆಯಲ್ಲಿ ಕಾರ್ಯಕರ್ತರ ನಡುವಿನ ಗಲಾಟೆಯನ್ನು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಪತ್ರಕರ್ತರ ಮೇಳೆ ಹಲ್ಲೆ ನಡೆಸಿದ್ದಾರೆ.

ಗಲಾಟೆಯ ದೃಶ್ಯ ಸೆರೆ ಹಿಡಿಯುವಾಗ ವರದಿಗಾರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗುತ್ತಿದೆ.

 ರಮೇಶ್ ಕುಮಾರ್ ಗಲಾಟೆ ವೇಳೆ ಕಾರ್ಯಕರ್ತರನ್ನು ಸಮಾದಾನ ಪಡಿಸುವ ಬದಲಾಗಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ರಮೇಶ್ ಕುಮಾರ್ ಹಾಗೂ ಕೆ.ಎಚ್ ಮುನಿಯಪ್ಪ ಬಣದವರು ಕಿತ್ತಾಟ ಮಾಡುವ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಬ್ಯಾನರ್‌ನಲ್ಲಿ ಮುನಿಯಪ್ಪ ಫೋಟೋ ಇಲ್ಲದಿದಕ್ಕೆ ಗಲಾಟೆ ಶುರುವಾಗಿತ್ತು.

ಆಕ್ರೋಶ: ಸ್ಥಳದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಭಾಗವಹಿಸಿ ರಮೇಶ್ ಕುಮಾರ್ ವಿರುದ್ದ ಆಕ್ರೋಶ ಹೊರಹಾಕಿದ್ದರು. ಆಗ ಸ್ಥಳಕ್ಕೆ ಆಗಮಿಸಿದ  ಕಾಂಗ್ರೇಸ್ ಜಿಲ್ಲಾ ಉಸ್ತುವಾರಿ ನಾರಾಯಣಸ್ವಾಮಿ, ಶಾಸಕ ಕೆ ವೈ ನಂಜೇಗೌಡ  ಹಾಗೂ ಪರಿಷತ್ ಸದಸ್ಯ ಅನಿಲ್ ಕುಮಾರ್ ಮತ್ತು ನಂದಿನಿ ಪ್ರವೀಣ್  ಕ್ಷಮೆಯಾಚಿಸಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು. 

 ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ  ನಝೀರ್ ಅಹ್ಮದ್, ಮಾಜಿ ಸಚಿವ ನಿಸಾರ್ ಅಹ್ಮದ್, ಕೌನ್ಸಿಲರ್ ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ನಗರಸಭಾ ಸದಸ್ಯ ಅಂಬರೀಶ್, ಸೀಸಂದ್ರ ಗೋಪಾಲ್, ಕೆ. ಜಯದೇವ್, ಊರುಬಾಗಿಲು ಶ್ರೀನಿವಾಸ್, ಮತ್ತಿತರರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News