ಡಿ.ಕೆ.ಸುರೇಶ್ ಆಪ್ತ ಸಹಾಯಕನಿಂದ ನೋಟು ಪರಿವರ್ತನೆ: ಸಿಬಿಐ ವಿಶೇಷ ಕೋರ್ಟ್ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

Update: 2022-07-29 16:46 GMT

ಬೆಂಗಳೂರು, ಜು.29: ಅಮಾನ್ಯಗೊಂಡ ನೋಟುಗಳನ್ನು ಸಂಸದ ಡಿ.ಕೆ.ಸುರೇಶ್ ಆಪ್ತ ಸಹಾಯಕ ಪದ್ಮನಾಭಯ್ಯ ಕಾನೂನು ಬಾಹಿರವಾಗಿ ಬದಲಾವಣೆ ಮಾಡಿಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ. 

ಸಿಬಿಐ ವಿಶೇಷ ನ್ಯಾಯಾಲಯದ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ನಾಮಮಂಗಲ ತಾಲೂಕಿನ ಪದ್ಮನಾಭಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. 

ಅರ್ಜಿದಾರರ ಪರ ವಾದಿಸಿದ ವಕೀಲರು, ಅರ್ಜಿದಾರರ ವಿರುದ್ಧ ಬಲವಾದ ಕಾರಣವಿಲ್ಲದಿದ್ದರೂ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಅಪರಾಧ ನಡೆದಿದೆ ಎನ್ನಲಾದ ದಿನದಿಂದ ನಾಲ್ಕು ತಿಂಗಳ ನಂತರ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಸಿಬಿಐ ವಿಶೇಷ ಕೋರ್ಟ್ ಆರೋಪಿಗಳ ವಿರುದ್ಧ ಐಪಿಸಿ ಕಲಂ, ಭ್ರಷ್ಟಾಚಾರ ನಿಗ್ರಹ ಕಾಯಿದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಿದೆ. ವಕೀಲರ ವಾದ ಆಲಿಸಿದ ನ್ಯಾಯಪೀಠವು, ಸಿಬಿಐ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ತಡೆ ನೀಡಿ ವಿಚಾರಣೆಯನ್ನು ಮುಂದೂಡಿತು.
  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News