×
Ad

ಭಾರಿ ಮಳೆ: ಇಂದು (ಜು.30) ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮುಲ್ಕಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Update: 2022-07-30 06:48 IST
ಡಾ.ಕೆ.ವಿ‌. ರಾಜೇಂದ್ರ 

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮುಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ.

ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಳೆಯಿಂದಾಗಿ ಮಂಗಳೂರು ನಗರದ ಹಲವು ರಸ್ತೆಗಳು ಜಲಾವೃತಗೊಂಡಿರುವುದರಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News