ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಮುತ್ತಿಗೆ: ಎಬಿವಿಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

Update: 2022-07-30 11:57 GMT

ಬೆಂಗಳೂರು: ರಾಜ್ಯದಲ್ಲಿ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ  ಹಿನ್ನೆಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ಕಾರ್ಯಕರ್ತರು ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ ಕೆಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗೃಹ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು. ಎಸ್‍ಡಿಪಿಐ, ಪಿಎಫ್‍ಐ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಲ್ಲದೆ ಸ್ಥಳಕ್ಕೆ ಗೃಹ ಸಚಿವರು ಬರುವಂತೆ ಪಟ್ಟು ಹಿಡಿದಿದ್ದರು.

ಬಾಗಿಲಿನ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರು, ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಬಳಿಕ  ನಿವಾಸದ ಒಳಗೆ ನುಗ್ಗಲು ಯತ್ನಿಸಿದಾಗ ಯತ್ನಿಸಿದಾಗ ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿ ಕಾರ್ಯಕರ್ತರನ್ನು ತಡೆದಿದ್ದಾರೆ.

ಗೃಹಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಿದ ಸುಮಾರು 40 ಜನರನ್ನ ದಸ್ತಗಿರಿ ಮಾಡಿದ್ದೇವೆ. ಈ ಘಟನೆಯ ವಿವರವಾದ ವರದಿಯನ್ನ ಡಿಸಿಪಿ ನೀಡುತ್ತಾರೆ. 

-  ಸಂದೀಪ್​ ಪಾಟೀಲ್,​ ಹೆಚ್ಚುವರಿ ಪೊಲೀಸ್ ಆಯುಕ್ತ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News