×
Ad

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌: ಓರ್ವ ಭಯೋತ್ಪಾದಕನ ಹತ್ಯೆ

Update: 2022-07-30 12:47 IST
Photo:PTI

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ವನಿಗಮ್ ಬಾಲಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ಹಾಗೂ  ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ.

ಇಂದು ಬೆಳಿಗ್ಗೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ  ಇತರ ಭದ್ರತಾ ಪಡೆಗಳು ಕಾರ್ಯನಿರತರಾಗಿರುವ ಬಾರಾಮುಲ್ಲಾ ಜಿಲ್ಲೆಯ ವನಿಗಮ್ ಬಾಲಾ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದೆ

“ಬಾರಾಮುಲ್ಲಾ ಎನ್‌ಕೌಂಟರ್ ಅಪ್‌ಡೇಟ್:  ಓರ್ವ ಭಯೋತ್ಪಾದಕನ ಹತ್ಯೆಗೈಯ್ಯಲಾಗಿದೆ. ಹುಡುಕಾಟ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುವುದು’’ ಎಂದು ಕಾಶ್ಮೀರ ವಲಯ ಪೊಲೀಸರು ಇಂದು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News