ಕೊನೆಗೂ ವಿಜಯನಗರ 'ಜಿಲ್ಲಾ ಉಸ್ತುವಾರಿ' ಆನಂದ್ ಸಿಂಗ್ ಪಾಲು

Update: 2022-07-30 12:01 GMT
 ಆನಂದ್ ಸಿಂಗ್ 

ಬೆಂಗಳೂರು, ಜು. 30: ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ನೂತನ ಜಿಲ್ಲೆ ರಚನೆ ಬಳಿಕ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ತಮಗೆ ನೀಡಬೇಕೆಂದು ಸಚಿವ ಆನಂದ್ ಸಿಂಗ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದರು. ಆದರೆ, ಆನಂದ್ ಸಿಂಗ್ ಅವರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನು ನೀಡಲಾಗಿತ್ತು.

ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ನೀಡಲಾಗಿತ್ತು. ಆ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಬೆಂಬಲಿಗರು ಜಿಲ್ಲೆಯಲ್ಲಿ ಬೀದಿಗಿಳಿದು ದೊಡ್ಡ ಮಟ್ಟದ ಹೋರಾಟವನ್ನೂ ಮಾಡಿದ್ದರು. ಆದರೆ, ಇದೀಗ ಕೊನೆಗೂ ಆನಂದ್ ಸಿಂಗ್ ಅವರಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ನೀಡಲಾಗಿದೆ.

ಇದೇ ವೇಳೆ ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿದ್ದ ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಮಾಲತಿ ಸಿ. ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: 'ನನ್ನ ವಿಜಯನಗರ ಜಿಲ್ಲೆಯ ಜನತೆ ದುಃಖದಲ್ಲಿದ್ದಾರೆ': ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಸಚಿವ ಆನಂದ್ ಸಿಂಗ್ ಅಸಮಾಧಾನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News