ಅಹಿತಕರ ಘಟನೆ ಹಿನ್ನೆಲೆ; ದ.ಕ. ಜಿಲ್ಲಾ ಮಟ್ಟದ ಶಾಂತಿ ಸಭೆ
Update: 2022-07-30 12:53 IST
ಮಂಗಳೂರು, ಜು. 30: ದ.ಕ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಅಹಿತಕರ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಮಟ್ಟದ ಶಾಂತಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಗೊಂಡಿದೆ.
ಸಭೆಯಲ್ಲಿ ಬಹುತೇಕ ಹಿಂದೂ, ಮುಸ್ಲಿಂ ಹಾಗೂ ಸಂಘಟನೆಗಳ ನಾಯಕರ ಅನುಪಸ್ಥಿತಿಯಲ್ಲಿ ಸಭೆ ನಡೆಯುತ್ತಿದೆ.
ಜಿಲ್ಲಾಧಿಕಾರಿ ರಾಜೇಂದ್ರ.ಕೆ.ವಿ. ನೇತೃತ್ವದಲ್ಲಿ ಶಾಂತಿ ಸಭೆ ನಡೆಯುತ್ತಿದ್ದು, ADGP ಅಲೋಕ್ ಕುಮಾರ್, IGP ದೇವಜ್ಯೋತಿ ರೇ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಭಾಗವಹಿಸಿದ್ದಾರೆ.
ಸಭೆಯ ಮುಂದಾಳತ್ವ ವಹಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಕೂಡಾ ಸಭೆಯಲ್ಲಿ ಭಾಗಿಯಾಗಿಲ್ಲ. ಕೆಲ ಪಕ್ಷಗಳ ಬೆರಳೆಣಿಕೆಯ ಮುಖಂಡರ ಉಪಸ್ಥಿತಿಯಲ್ಲಿ ಸಭೆ ನಡೆಯುತ್ತಿದೆ.
ಮಾಧ್ಯಮ ಪ್ರತಿನಿಧಿಗಳನ್ನು ಸಭೆಯಿಂದ ಹೊರಗಿಡಲಾಗಿದೆ.