×
Ad

ಭಾರತದ ಮೊದಲ ಮಂಕಿಪಾಕ್ಸ್ ರೋಗಿ "ಸಂಪೂರ್ಣವಾಗಿ ಗುಣಮುಖ": ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

Update: 2022-07-30 15:09 IST
Photo:twitter

ತಿರುವನಂತಪುರ: ಭಾರತದ ಮೊದಲ ಮಂಕಿಪಾಕ್ಸ್ ರೋಗಿಯಾಗಿರುವ ತಿರುವನಂತಪುರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳದ ವ್ಯಕ್ತಿಯೊಬ್ಬರು ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶನಿವಾರ ತಿಳಿಸಿದ್ದಾರೆ.

ಕೇರಳದ ಕೊಲ್ಲಂನ 35 ವರ್ಷದ ವ್ಯಕ್ತಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗುವುದು ಎಂದು ಅವರು ಹೇಳಿದರು.

ಇದು ದೇಶದಲ್ಲಿ ಮಂಗನ ಕಾಯಿಲೆಯ ಮೊದಲ ಪ್ರಕರಣವಾಗಿರುವುದರಿಂದ  ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಎನ್‌ಐವಿ) ಸೂಚನೆಯಂತೆ 72 ಗಂಟೆಗಳ ಮಧ್ಯಂತರದಲ್ಲಿ ಎರಡು ಬಾರಿ ಪರೀಕ್ಷೆಗಳನ್ನು ನಡೆಸಲಾಯಿತು.

"ಎಲ್ಲ ಮಾದರಿಗಳು ಎರಡು ಬಾರಿ ಋಣಾತ್ಮಕವಾಗಿವೆ. ರೋಗಿಯು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ. ಅವರು  ಸಂಪೂರ್ಣವಾಗಿ ಗುಣಮುಖವಾಗಿದ್ದಾರೆ. ಇಂದು ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ" ಎಂದು ವೀಣಾ ಜಾರ್ಜ್ ಹೇಳಿದರು.

ರೋಗಿಯೊಂದಿಗೆ ಪ್ರಾಥಮಿಕ ಸಂಪರ್ಕ ಪಟ್ಟಿಯಲ್ಲಿದ್ದ ಅವರ ಕುಟುಂಬದ ಸದಸ್ಯರ ಪರೀಕ್ಷೆಯ ಫಲಿತಾಂಶವೂ ನೆಗೆಟಿವ್ ವಾಗಿದೆ ಎಂದು ಸಚಿವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News