95 ಹೊಸ ಪ್ರೌಢಶಾಲೆಗಳನ್ನು ಆರಂಭಿಸಲು ಆದೇಶಿಸಿದ ಸರಕಾರ

Update: 2022-07-30 14:56 GMT

ಬೆಂಗಳೂರು, ಜು.30: ರಾಜ್ಯದ 95 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಸರಕಾರವು ಆದೇಶಿಸಿದೆ. 

ಸಮಗ್ರ ಶಿಕ್ಷಣ ಕರ್ನಾಟಕ ಅಡಿಯಲ್ಲಿ ನಿಗದಿಪಡಿಸಿದ ವಸ್ತುನಿಷ್ಠ ಮಾನದಂಡಗಳು, ಅವಶ್ಯಕತೆಗಳು, ಸೌಲಭ್ಯಗಳ ಲಭ್ಯತೆ ಹಾಗೂ ಮಾರ್ಗಸೂಚಿಗಳ ಪ್ರಕಾರ ರಾಜ್ಯಾದ್ಯಂತ 79 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ಶಿಕ್ಷಣ ಇಲಾಖೆಯ ಆಯುಕ್ತರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. 

ಸರಕಾರದ ಹಂತದಲ್ಲಿ ಪರಿಶೀಲನೆ ನಡೆಸಿ, ಇನ್ನೂ ಕೆಲವು ಗ್ರಾಮಗಳಲ್ಲಿ ಪ್ರೌಢಶಾಲೆಗಳು ಇಲ್ಲದೆ ಇರುವುದರಿಂದ 100 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಬಗ್ಗೆ ಆಯುಕ್ತರಿಂದ ವರದಿಯನ್ನು ಪಡೆಯಲಾಗಿತ್ತು. ಅದರಂತೆ ಆರ್ಥಿಕ ಇಲಾಖೆಯು ಸಹಮತಿ ನೀಡಿದ ಬೆನ್ನಲ್ಲೇ 95 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸಲು ತೀರ್ಮಾನಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News