ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ 36 ರೂ. ಇಳಿಕೆ
Update: 2022-08-01 10:39 IST
ಹೊಸದಿಲ್ಲಿ: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರೂ.ಗೆ ಇಳಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.
ಇದರೊಂದಿಗೆ ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 2,012.50 ರೂ.ನಿಂದ 1,976ಕ್ಕೆ ಇಳಿದಿದೆ. ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗಲಿದೆ.
ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಜುಲೈ 6ರಂದು 50 ರೂ.ಗೆ ಹೆಚ್ಚಿಸಲಾಗಿತ್ತು.
The price of a commercial LPG cylinder has been cut by Rs 36 from today. With this latest reduction, a 19 kg commercial LPG cylinder will cost Rs 1,976, instead of Rs 2012.50.
— ANI (@ANI) August 1, 2022