×
Ad

ವಿಧಾನ ಪರಿಷತ್ ಉಪ ಚುನಾವಣೆ | ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ

Update: 2022-08-01 12:32 IST

ಬೆಂಗಳೂರು, ಆ.1: ರಾಜ್ಯ ವಿಧಾನಸಭೆಯ ಪ್ರತಿನಿಧಿಗಳಿಂದ ರಾಜ್ಯ ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಇಂದು ವಿಧಾನಸೌಧದಲ್ಲಿ ಸಹಾಯಕ ಚುನಾವಣಾಧಿಕಾರಿ ವಿಶಾಲಾಕ್ಷಿಯವರಿಗೆ ನಾಮಪತ್ರ ಸಲ್ಲಿಸಿದರು.

ಮೊದಲ ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಂಸದ ಉಮೇಶ್ ಜಾಧವ್ ಮತ್ತು ಶಾಸಕ ರವಿಕುಮಾರ್ ಉಪಸ್ಥಿತರಿದ್ದರು.

ಎರಡನೇ ನಾಮಪತ್ರ ಸಲ್ಲಿಸುವ ವೇಳೆ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರು, ರಾಜಕುಮಾರ್ ಪಾಟೀಲ್ ಮತ್ತು ಶರಣು ಸಲಗಾರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News