×
Ad

ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ

Update: 2022-08-01 14:17 IST

ದಾವಣಗೆರೆ, ಆ.1: ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು. ಯಾರಿಗೂ ಭೇದ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ದಾವಣಗೆರೆಯ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಹಿಂದಿನ ಸರಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ? ಆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು    ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿದೆ

ರಾಜ್ಯದಲ್ಲಿ ನಮ್ಮ ಕಾರ್ಯಕರ್ತರ ಪ್ರತಿಭಟನೆ ಕಡಿಮೆಯಾಗಿದೆ. ನಾವು ಈಗಾಗಲೇ ಕಾರ್ಯಾಚರಣೆ ಮಾಡುತ್ತಿರುವುದರಿಂದ ಎಲ್ಲರಿಗೂ ಕೂಡ ವಿಶ್ವಾಸ ಬಂದಿದೆ. ಖಂಡಿತವಾಗಿಯೂ ನಮ್ಮ ಪೊಲೀಸರು ಯಾರು ಕೊಲೆಗಡುಕರಿದ್ದಾರೆ ಅವರನ್ನು ಪತ್ತೆ ಹಚ್ಚುತ್ತಾರೆ ಎನ್ನುವ ವಿಶ್ವಾಸ ನನಗೆ ಇದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಭದ್ರತೆ ಸಮಸ್ಯೆ ಇಲ್ಲ

ಗೃಹಸಚಿವರ ಮನೆಗೆ ಭದ್ರತೆ ಸಮಸ್ಯೆಯಿಲ್ಲ. ಪ್ರತಿಭಟನಾಕಾರರು ಬಂದ ಸಂದರ್ಭದಲ್ಲಿ ಭದ್ರತೆಯ ಸಮಯದಲ್ಲಿ ಯಾರು ಇರಬೇಕಿತ್ತೋ  ಅವರು ಇರಲಿಲ್ಲ. ಅವರಿಗೆ ತಾಕೀತು ಮಾಡಿ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News