×
Ad

ಮಧ್ಯಪ್ರದೇಶ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ಮಂದಿ ಸಾವು

Update: 2022-08-01 16:43 IST
Photo: twitter

ಜಬಲ್ಪುರ, ಆ. 1: ಮಧ್ಯಪ್ರದೇಶ ಜಬಲ್ಪುರ ನಗರದಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೋಮವಾರ ಸಂಭವಿಸಿದ ಬೆಂಕಿ ಅವಘಡವೊಂದರಲ್ಲಿ  ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 9 ಮಂದಿ ಗಾಯಗೊಂಡಿದ್ದಾರೆ.

ಜಬಲ್ಪುರದಲ್ಲಿರುವ ಗೋಹಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಡಿಯಲ್ಲಿ ಬರುವ ದಾಮೋಹ್ ನಾಕಾದ ಸಮೀಪ ಇರುವ ನ್ಯೂಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತೆಯಲ್ಲಿ ಸೋಮವಾರ ಅಪರಾಹ್ನ ಬೆಂಕಿ ಅವಘಡ  ಸಂಭವಿಸಿತು ಎಂದು ಪೊಲೀಸ್ ಅಧೀಕ್ಷಕ ಸಿದ್ದಾರ್ಥ್ ಬಹುಗುಣ ಅವರು ಹೇಳಿದ್ದಾರೆ. ಆಸ್ಪತ್ರೆಯ ಒಳಗೆ ಸಿಲುಕಿಕೊಂಡಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ ಎಂದು ಜಬಲ್ಪುರದ ಮುಖ್ಯ ಪೊಲೀಸ್ ಅಧೀಕ್ಷಕ ಅಖಿಲೇಶ್ ಗೌರವ್ ತಿಳಿಸಿದ್ದಾರೆ. ಬೆಂಕಿ ನಂದಿಸಲಾಗಿದೆ. ಈ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಅವರು ಹೇಳಿದ್ದಾರೆ.
ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News