×
Ad

ಸಾಗರ | ಬಸ್ - ಕಾರು ನಡುವೆ ಅಪಘಾತ: ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Update: 2022-08-01 18:22 IST

ಸಾಗರ : ಕಾರು ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಾಗರ ತಾಲೂಕಿನ ತಾಳಗುಪ್ಪದ ಆಲಳ್ಳಿಯಲ್ಲಿ ಸೋಮವಾರ ಸಂಜೆ ನಡೆದಿದೆ. 

ಮೃತ ವ್ಯಕ್ತಿ ಚನ್ನಗಿರಿಯ ಶಾಬಾಝ್ (23) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ರಿಹಾನ್(14), ತಬಸ್ಸುಮ್(23), ಶಿಫಾ(27),ಖಮರುನ್ನಿಸಾ(45),ಜಬ್ರುನ್(55),ಮಹಮ್ಮದ್ ಉಸ್ಮಾನ್(25) ಸೇರಿ ಎಲ್ಲಾ ಆರು ಮಂದಿಗೂ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಇವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ,ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಜೋಗ ಜಲಪಾತ ವೀಕ್ಷಿಸಿ ವಾಪಸ್ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News