×
Ad

ನೂತನ ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆಗೆ ಗೌರವ

Update: 2022-08-01 20:40 IST

ಕುಂದಾಪುರ : ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಕುಂದಾಪುರ, ಬೈಂದೂರು ವಲಯದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಛಾಯಾಗ್ರಾಹಕರನ್ನುದ್ದೇಶಿಸಿ ಮಾತನಾಡಿದ ವೀರೇಂದ್ರ ಹೆಗ್ಡೆ, ಆಧುನಿಕ ತಂತ್ರಜ್ಞಾನದಿಂದ ಛಾಯಾಗ್ರಾಹಕರು ಸವಾಲಿಗೊಳಗಾಗಿದ್ದು ಆ ಸವಾಲನ್ನು ಮೀರಿ ತಂತ್ರಜ್ಞಾನವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಎಲ್ಲಾ ಛಾಯಾಗ್ರಾಹಕರಿಗೂ ಭಗವಂತನ ಅನುಗ್ರಹ ಸದಾಕಾಲವೂ ಇರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಆನಂದ ಬಂಟ್ವಾಳ್, ಕುಂದಾಪುರ-ಬೈಂದೂರು ವಲಯ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಸಲಹಾ ಸಮಿತಿ ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಪ್ರಧಾನ ಕಾರ್ಯದರ್ಶಿ ಸುರೇಶ್ ಜಮದಗ್ನಿ, ಅಮೃತ್ ಬೀಜಾಡಿ, ದಿನೇಶ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News