×
Ad

ಸುಬ್ರಹ್ಮಣ್ಯ; ಮನೆ ಮೇಲೆ ಕುಸಿದು ಬಿದ್ದ ಗುಡ್ಡ: ಮಣ್ಣಿನಡಿ ಸಿಲುಕಿದ ಮನೆ ಮಂದಿ

Update: 2022-08-01 22:15 IST

ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದು, ಮನೆ ಸಂಪೂರ್ಣವಾಗಿ ನಾಶಗೊಂಡಿದೆ. ಇಬ್ಬರು ಮಕ್ಕಳು ಸೇರಿ ಮನೆಯವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಧಾರಾಕಾರ ಮಳೆಗೆ ಏಕಾಏಕಿ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದಿದೆ ಎಂದು ಹೇಳಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿದು ಅನಾಹುತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮಣ್ಣಿನಡಿಯಲ್ಲಿ ಸಿಲುಕಿದವರನ್ನು ಹೊರ ತೆಗೆಯಲು ಪ್ರಯತ್ನ ನಡೆಯುತಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News