ಭಟ್ಕಳದಲ್ಲಿ ಭಾರೀ ಮಳೆ: ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Update: 2022-08-02 08:17 IST
ಭಟ್ಕಳ: ಭಟ್ಕಳ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಪಟ್ಟಣದ ಹಲವು ಪ್ರದೇಶಗಳು ಜಲಾವೃತವಾಗಿವೆ, ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಆ.2) ಭಟ್ಕಳ ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ನೀಡಿ ಆದೇಶಿಸಿದ್ದಾರೆ.
ಭಟ್ಕಳದ ಮುಟ್ಟೊಳ್ಳಿಯಲ್ಲಿ ಗುಡ್ಡ ಕುಸಿದಿದ್ದು, ಮನೆಯೊಂದರ ಮೇಲೆ ಮಣ್ಣು ಬಿದ್ದಿದೆ. ಪಟ್ಟಣ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ಹಾಗೂ ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಅಸಾಧ್ಯವಾಗಿದೆ. ಮುಂದಿನ ಸೂಚನೆಯ ತನಕ ಭಟ್ಕಳದ ಮೂಲಕ ಪ್ರಯಾಣ ಮಾಡುವುದು ಬೇಡ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.