ಸುಳ್ಯ: ಸಂತೆಡ್ಕ ಸೇತುವೆ ನೀರು ಪಾಲು; 150ಕ್ಕೂ ಅಧಿಕ ಮನೆಗಳಿಗೆ ಸಂಪರ್ಕ ಕಡಿತ
Update: 2022-08-02 08:31 IST
ಸುಳ್ಯ: ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಕಲ್ಮಕಾರಿನ ಪೇಟೆಯಲ್ಲಿರುವ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿ ನೀರು ಪಾಲಾಗಿದೆ. ಆ ಭಾಗದ ಜನಗಳ ಸಂಪರ್ಕ ಕಡಿತಗೊಂಡಿದೆ.
ಆ ಭಾಗದಲ್ಲಿ 150ಕ್ಕೂ ಅಧಿಕ ಮನೆಗಳಿದ್ದು ಶಾಲೆಗೆ ಹೋಗುವ ವಿದ್ಯಾರ್ಥಿಗಳು, ವೃದ್ಧರು, ಸಾರ್ವಜನಿಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ.