×
Ad

ಭಟ್ಕಳ; ಮನೆ ಮೇಲೆ ಕುಸಿದು ಬಿದ್ದ ಗುಡ್ಡ: ಮಣ್ಣಿನಡಿ ಸಿಲುಕಿದ ಮನೆ ಮಂದಿ

Update: 2022-08-02 10:04 IST

ಭಟ್ಕಳ: ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದು, ಮನೆ ಸಂಪೂರ್ಣ ಕುಸಿದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ಮುಟ್ಟಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮನೆಯಲ್ಲಿದ್ದ ಲಕ್ಷ್ಮಿ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (20) ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಮನೆ ಸಂಪೂರ್ಣ ನಾಶವಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News