ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ಮತ್ತೆ ಇಬ್ಬರು ಆರೋಪಿಗಳ ಬಂಧನ: ದ.ಕ. ಜಿಲ್ಲಾ ಎಸ್ಪಿ
Update: 2022-08-02 11:48 IST
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ತಿಳಿಸಿದ್ದಾರೆ.
ಬೆಳ್ಳಾರೆ ಪಳ್ಳಿಮಜಲಿನ ಸದ್ದಾಂ (32) ಹಾಗು ಹಾರಿಸ್ (42) ಬಂಧಿತ ಆರೋಪಿಗಳು ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಜು. 28ರಂದು ಸವಣೂರಿನ ಝಾಕಿರ್ ಮತ್ತು ಶಫೀಕ್ ಬೆಳ್ಳಾರೆ ಎಂಬವರನ್ನು ಬಂಧಿಸಲಾಗಿದೆ. ಇವರನ್ನು ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗಿದ್ದು, ಇದರ ಆಧಾರದಲ್ಲಿ ಮತ್ತೆ ಇಬ್ಬರನ್ನು ಆ. 2ರಂದು ಬಂಧಿಸಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು, ಈ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ದ.ಕ. ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.