×
Ad

ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ವರದಿ

Update: 2022-08-02 13:08 IST
Photo:PTI

 ಹೊಸದಿಲ್ಲಿ: ರಾಜ್ಯದಲ್ಲಿ ಮಂಗನ ಕಾಯಿಲೆಯ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಕೆಲವೇ ದಿನಗಳಲ್ಲಿ ಯುಎಇಯಿಂದ ಹಿಂದಿರುಗಿದ ವ್ಯಕ್ತಿಯೊಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ  ಕೇರಳದಲ್ಲಿ ಮತ್ತೊಂದು ಮಂಗನ ಕಾಯಿಲೆ ದೃಢಪಟ್ಟಿದೆ. ಇದು ರಾಜ್ಯದಲ್ಲಿ ಕಂಡುಬಂದ ಐದನೇ ಮಂಕಿಪಾಕ್ಸ್ ಪ್ರಕರಣವಾಗಿದೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ರಾಜ್ಯದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

30 ವರ್ಷದ ರೋಗಿಯು ಪ್ರಸ್ತುತ ಮಲಪ್ಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ವ್ಯಕ್ತಿಯು ಯುಎಇಯಿಂದ ಜುಲೈ 27 ರಂದು ಕೋಝಿಕೋಡ್ ವಿಮಾನ ನಿಲ್ದಾಣವನ್ನು ತಲುಪಿದ್ದರು ಹಾಗೂ  ಮಲಪ್ಪುರಂನ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಸಚಿವರು ಹೇಳಿದರು.

 ಭಾರತದಲ್ಲಿ ಇದುವರೆಗೆ 7  ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News