×
Ad

ಹೆಸರಿಗೆ ಮೊಟ್ಟೆ ವಿತರಣೆ ಕಾರ್ಯಕ್ರಮ, ನೀಡಿದ್ದು ಮಾತ್ರ ಬಾಳೆಹಣ್ಣು: ಸಚಿವ ಕಾರಜೋಳ ವಿರುದ್ಧ ಕಾಂಗ್ರೆಸ್ ಆರೋಪ

Update: 2022-08-02 13:29 IST

ಬೆಂಗಳೂರು, ಆ.2:  ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1ರಿಂದ 8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಸರಕಾರ ಮೊಟ್ಟೆ ವಿತರಿಸುತ್ತಿದ್ದು, ಇದರ ಭಾಗವಾಗಿ ಮುಧೋಳದ ಶಾಲೆಗಳಲ್ಲಿ ನಡೆದ ಮೊಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಮೊಟ್ಟೆ ಬದಲಿಗೆ ಬಾಳೆಹಣ್ಣು ಮಾತ್ರ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಸಚಿವರು ಶಾಲೆ ಮಕ್ಕಳಿಗೆ ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿ ಹಂಚುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದೆ. 

''ಹೆಸರಿಗೆ ಮಾತ್ರ ಮೊಟ್ಟೆ ವಿತರಣೆ ಕಾರ್ಯಕ್ರಮ. ಆದರೆ ನೀಡಿದ್ದು ಮಾತ್ರ ಬಾಳೆಹಣ್ಣು! ಗೋವಿಂದ್ ಕಾರಜೋಳರಿಗೆ ಮೊಟ್ಟೆ ಮುಟ್ಟಲು ಅಸಹ್ಯವೇ, ಅಥವಾ ಮೊಟ್ಟೆ ನೀಡಲು ಸರ್ಕಾರಕ್ಕೆ ಯೋಗ್ಯತೆ ಇಲ್ಲವೇ? ಬಿಜೆಪಿ  ಸರ್ಕಾರ ಮಕ್ಕಳ ಶೈಕ್ಷಣಿಕ ಬೆಳವಣಿಗೆ ಹಾಗೂ ಪೌಷ್ಟಿಕತೆಯ ಬೆಳವಣಿಗೆಯ ಬಗ್ಗೆ ಕಿಂಚಿತ್ ಕಾಳಜಿ ಇಲ್ಲದಾಗಿದೆ'' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 

ಇದನ್ನೂ ಓದಿ:  ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವುದಕ್ಕೆ ತೇಜಸ್ವಿನಿ ಅನಂತ್ ಕುಮಾರ್ ವಿರೋಧ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News