ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿ.ಕೆ‌ ಶಿವಕುಮಾರ್​​ಗೆ ಜಾಮೀನು

Update: 2022-08-03 04:23 GMT

ಬೆಂಗಳೂರು, ಆ.2: ಅಕ್ರಮ ಹಣ  ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೆ‌ಪಿಸಿಸಿ ಅಧ್ಯಕ್ಷ ಡಿಕೆ‌ ಶಿವಕುಮಾರ್​​ಗೆ ಜಾಮೀನು ಮಂಜೂರು ಮಾಡಿ ದೆಹಲಿಯ ಈಡಿ ವಿಶೇಷ ಕೋರ್ಟ್ ಆದೇಶ ನೀಡಿದೆ.

ಜುಲೈ 30ರಂದು ಎರಡೂ ಕಡೆಯ ವಾದ, ಪ್ರತಿವಾದ ಆಲಿಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಕಾಸ್ ಧುಲ್ ಅವರು   ಆದೇಶವನ್ನು ಕಾಯ್ದಿರಿಸಿದ್ದರು. ಆದೇಶವನ್ನು ಪ್ರಕಟಿಸುವಾಗ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು. 

ಪ್ರಕರಣದ ಇತರೆ ಆರೋಪಿಗಳಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮಾ ಮತ್ತು ರಾಜೇಂದ್ರಗೂ ಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿತು.

ಡಿ.ಕೆ ಶಿವಕುಮಾರ್ ಮತ್ತು ಉದ್ಯಮಿ ಸಚಿನ್ ನಾರಾಯಣ್, ಶರ್ಮಾ ಟ್ರಾನ್ಸ್‌ಪೋರ್ಟ್ ಮಾಲಕ ಸುನೀಲ್ ಕುಮಾರ್ ಶರ್ಮಾ, ಕರ್ನಾಟಕ ಭವನದ ಉದ್ಯೋಗಿ ಆಂಜನೇಯ ಮತ್ತು ರಾಜೇಂದ್ರ ಸೇರಿದಂತೆ ಇತರ ಆರೋಪಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿವರ್ತಿಸಲು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News