×
Ad

ಹತ್ಯೆ ಪ್ರಕರಣ | ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯ ಬೇಡ: ಮಂತ್ರಾಲಯದ ಸುಬುಧೇಂದ್ರ ತೀರ್ಥರು

Update: 2022-08-02 17:51 IST

ರಾಯಚೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತ್ಯೆಗೀಡಾದ ಯುವಕರ ಕುಟುಂಬಸ್ಥರಿಗೆ ಪರಿಹಾರ ನೀಡುವ ವಿಚಾರದಲ್ಲಿ ಯಾವುದೇ ತಾರತಮ್ಯ ಬೇಡ ಎಂದು ಮಂತ್ರಾಲಯದ ರಾಘವೇಂದ್ರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ. 

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರ ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯ ನಡೆಸುತ್ತಿದೆ ಎಂಬ ಆರೋಪದ ಕುರಿತ ಪತ್ರಕರ್ತರ ಪ್ರಶ್ನೆಗಳಿಗೆ  ಶ್ರೀಸುಬುಧೇಂದ್ರ ತೀರ್ಥರು ಪ್ರತಿಕ್ರಿಯಿಸಿದರು. 

''ಎಲ್ಲರೂ ಜೀವಿಗಳು, ಪ್ರಾಣ ಕಳೆದುಕೊಂಡವರೆಲ್ಲ ಸಮಾನರು. ಎಲ್ಲರಿಗೂ ಸೂಕ್ತ ರೀತಿಯ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಕೋರುತ್ತೇನೆ'' ಎಂದು ತಿಳಿಸಿದರು.

''ಅನಾಹುತಕ್ಕೀಡಾದವರ ಕುಟುಂಬದವರು ನಿರ್ಗತಿಕರಾಗಬಾರದು ಎನ್ನುವ ಕಾರಣದಿಂದ ಸರ್ಕಾರಗಳು ಪರಿಹಾರ ನೀಡುವ ಕೆಲಸ ಮಾಡುತ್ತವೆ. ಯಾವುದೇ ರಾಜ್ಯದಲ್ಲಿ ಹತ್ಯೆಯಾದ ವ್ಯಕ್ತಿಯ ಕುಟುಂಬಕ್ಕೆ ಹಣ ನೀಡುವುದು ಪರ್ಯಾಯವಲ್ಲ. ಜೀವ ಮತ್ತು ಹಣ ಎರಡನ್ನೂ ತುಲನೆ ಮಾಡಲಾಗುವುದಿಲ್ಲ'' ಎಂದು ಇದೇ ವೇಳೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News