ಮಲ್ಪೆ: ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್‌ಗೆ ಮುಕ್ತ ವಿವಿಯಿಂದ ಪಿಎಚ್‌ಡಿ
Update: 2022-08-02 18:33 IST
ಉಡುಪಿ, ಆ.2: ಪ್ರಸ್ತುತ ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯ ವಾಹನ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್‌ಟೇಬಲ್ ಸಂತೋಷ್ ಶೆಟ್ಟಿ ಇವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಲಭಿಸಿದೆ.
ಸಂತೋಷ್ ಶೆಟ್ಟಿ ಇವರು ಮಂಡಿಸಿದ ‘ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ- ಒಂದು ಅಧ್ಯಯನ’ ಎಂಬ ಸಂಶೋಧನಾ ಪ್ರಬಂಧಕ್ಕೆ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪಿಹೆಚ್‌ಡಿ ಪದವಿ ನೀಡಿದ್ದು, ಇತ್ತೀಚೆಗೆ ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಕೇಂದ್ರ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಇವರಿಂದ ಪ್ರಶಸ್ತಿ ಪತ್ರ ಹಾಗೂ ನಗದು ಪುರಸ್ಕಾರ ಪಡೆದಿದ್ದಾರೆ.