×
Ad

ಮಲೆ ಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತಾರಣ್ಯ ಪ್ರದೇಶವಾಗಿ ಘೋಷಣೆ ಮಾಡಲ್ಲ: ಸಚಿವ ವಿ.ಸೋಮಣ್ಣ

Update: 2022-08-02 18:37 IST
(Photo-PTI)

ಚಾಮರಾಜನಗರ: “ಮಲೆ‌ ಮಹದೇಶ್ವರ ವನ್ಯಜೀವಿ ‌ಧಾಮವನ್ನು ಹುಲಿ ಸಂರಕ್ಷಿತಾರಣ್ಯ ಪ್ರದೇಶವಾಗಿ ಘೋಷಣೆ ಮಾಡಲ್ಲ” ಎಂದು ವಸತಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಮಹದೇಶ್ವರಬೆಟ್ಟದ ವ್ಯಾಪ್ತಿಯ ಪೊನ್ನಾಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹುಲಿ ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದರು.

ಮಲೆಮಹದೇಶ್ವರ ಬೆಟ್ಟ ಇತಿಹಾಸ ಪ್ರಸಿದ್ಧ ಕ್ಷೇತ್ರ ಈ ಭಾಗದಲ್ಲಿ ಕಾಡಂಚಿನ ಗ್ರಾಮಗಳು ಹೆಚ್ಚಾಗಿವೆ. ಕಾಡಿನ ಒಳಗಡೆ ಸಹಾ ಗ್ರಾಮಗಳಿವೆ. ಈ ಭಾಗದ ಜನರಿಗೆ ಅನಾನುಕೂಲವಾಗಬಾರದು. ಬೆಟ್ಟಕ್ಕೆ ಬರುವ ಭಕ್ತರಿಗೆ ತೊಂದರೆಯಾಗಬಾರದು. ಮಲೆ ಮಹದೇಶ್ವರ ಬೆಟ್ಟಕ್ಕೆ ಈ ಭಾಗದ ರೈತರೇ ವಾರಸುದಾರರು. ಯಾವುದೇ ಯೋಜನೆ ಜನರಿಗೆ ಅನುಕೂಲವಾಗಬೇಕೆ ಹೊರತು ಅನಾನುಕೂಲವಾಗಬಾರದು. ಹೀಗಾಗಿ ಈ ಯೋಜನೆಗೆ ಅನುಮತಿ ನೀಡಲ್ಲ ಎಂದರು.

ಹುಲಿ ಯೋಜನೆ ಪ್ರದೇಶವಾಗಿ ಮಲೆ ಮಹದೇಶ್ವರ ವನ್ಯಜೀವಿ ಧಾಮ‌ ಘೋಷಣೆಯಾಗುವ ಹಂತದಲ್ಲಿತ್ತು. ಈ ಸಂಬಂಧ ಸರ್ಕಾರಕ್ಕೆ‌ ವರದಿ ಸಲ್ಲಿಕೆಯಾಗಿ ನಿರ್ಧಾರ ಪ್ರಕಟ ಭಾಗಿ ಉಳಿದಿತ್ತು. ಈ ಬೆಳವಣಿಗೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಹುಲಿ ಮೀಸಲು ಪ್ರದೇಶ ಘೋಷಣೆ ಮಾಡಬಾರದು ಎಂದು ಒತ್ತಾಯಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News