ಎಸಿಬಿ ದಾಳಿ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಶಾಸಕ ಝಮೀರ್ ಗೆ ನೋಟಿಸ್
Update: 2022-08-02 21:10 IST
ಬೆಂಗಳೂರು, ಆ.2: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ ಪ್ರಕರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ಅಧಿಕಾರಿಗಳು ಶಾಸಕ ಝಮೀರ್ ಅಹ್ಮದ್ ಖಾನ್ ಅವರಿಗೆ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.
ಆ.6 ರಂದು ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದ್ದು, ಆಸ್ತಿ ಮೂಲಗಳ ಕುರಿತು ದಾಖಲೆ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜು.5ರಂದು ಝಮೀರ್ ಅವರ ನಿವಾಸ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಇದಾದ ಬಳಿಕ ವಿಚಾರಣೆಗೆ ಹಾಜರಾಗಲು ಝಮೀರ್ ಕಾಲಾವಕಾಶಕ್ಕೆ ಮನವಿ ಮಾಡಿದ್ದರು.
ಇದೀಗ ಕಡ್ಡಾಯವಾಗಿ ಆ.6ರಂದು ಎಸಿಬಿ ಕಚೇರಿಗೆ ಹಾಜರಾಗಲು ಸೂಚಿಸಲಾಗಿದೆ ಎಂದು ಎಸಿಬಿ ಮೂಲಗಳು ಹೇಳಿವೆ.