ವಿಶಾಖಪಟ್ಟಣಂ: ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆ, 50 ಕಾರ್ಮಿಕರು ಅಸ್ವಸ್ಥ

Update: 2022-08-02 17:28 GMT
photo credit - twitter

ವಿಶಾಖಪಟ್ಟನಂ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಬ್ರಾಂಡಿಕ್ಸ್ ವಿಶೇಷ ಆರ್ಥಿಕ ವಲಯದಲ್ಲಿರುವ ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿ ಕನಿಷ್ಠ 50 ಕಾರ್ಮಿಕರು ಇಂದು ಅಸ್ವಸ್ಥರಾಗಿದ್ದಾರೆ.

 ಅನಿಲ ಸೋರಿಕೆಯಾದ ನಂತರ ಕಾರ್ಮಿಕರು ವಾಕರಿಕೆ ಮತ್ತು ವಾಂತಿಯಿಂದ ಬಳಲಿದ್ದಾರೆ ಎಂದು ವರದಿಯಾಗಿದೆ. 

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಎಲ್ಲಾ ಕಾರ್ಮಿಕರಿಗೆ SEZ ನಲ್ಲಿನ ವೈದ್ಯಕೀಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ತರ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು.

"ಬ್ರ್ಯಾಂಡಿಕ್ಸ್ ಆವರಣದಲ್ಲಿ ಅನಿಲ ಸೋರಿಕೆ ಸಂಭವಿಸಿದೆ ಎಂದು ವರದಿಯಾಗಿದೆ. 50 ಜನರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ" ಎಂದು ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಜೂನ್ 3 ರಂದು ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, 200 ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಕಣ್ಣುನೋವು, ವಾಕರಿಕೆ ಮತ್ತು ವಾಂತಿಯಿಂದ ಪ್ರಜ್ಞಾಹೀನರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News