×
Ad

ರಾಜ್ಯ ಯುವ ಪ್ರಶಸ್ತಿಗೆ ರಾಮಾಂಜಿ ಆಯ್ಕೆ

Update: 2022-08-03 20:28 IST
ರಾಮಾಂಜಿ

ಉಡುಪಿ, ಆ.3: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನೀಡುವ ಕರ್ನಾಟಕ ರಾಜ್ಯ ಯುವ ಪ್ರಶಸ್ತಿಗೆ ರಂಗಭೂಮಿ ಕ್ಷೇತ್ರಕ್ಕೆ ಸಂಬಂಧಿಸಿ ಉಡುಪಿ ಜಿಲ್ಲೆಯಿಂದ ರಾಮಾಂಜಿ ಆಯ್ಕೆಗೊಂಡಿದ್ದಾರೆ.

ಇವರು ಕುಂದಾಪುರದ ಅಂತಾರಾಷ್ಟ್ರೀಯ ದುಡಿಯುವ ಮಕ್ಕಳ ಸಂಸ್ಥೆಯಾದ ನಮ್ಮ ಭೂಮಿಯ ಪ್ರತಿನಿಧಿಯಾಗಿದ್ದು, ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿಯಾಗಿ ಪ್ರಸ್ತುತ ಮಂಗಳೂರು ವಿಶ್ವ ವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಂತಿಮ ವರ್ಷದ ಕನ್ನಡ ಎಂ.ಎ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದಾರೆ.

ಯಕ್ಷಗಾನ ಕಲಾಕೇಂದ್ರ ಉಡುಪಿ, ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರದ ವಿದ್ಯಾರ್ಥಿಯೂ ಆಗಿರುತ್ತಾರೆ. ಕಲೆ, ಸಂಸ್ಕೃತಿ, ಸಾಮಾಜಿಕ, ಪರಿಸರ, ಶಿಕ್ಷಣ, ಸಾಹಿತ್ಯ ವಿಷಯಗಳಿಗೆ ಸಂಬಂಧಿಸಿದಂತೆ ನಾಡಿನ ವಿವಿಧ ಸಂಘ ಸಂಸ್ಥೆಗಳಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಚಿಕ್ಕಮಗಳೂರಿನ ತರೀಕೆರೆಯ ಡಾ.ಬಿ.ಆರ.ಅಂಬೇಡ್ಕರ್ ಬಯಲು ರಂಗ ಮಂದಿರದಲ್ಲಿ ಆ.೭ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News