ಅಮೂಲ್, ಕೆಎಂಎಫ್ ಪ್ರಾಯೋಜಕತ್ವದಲ್ಲಿ ವಿಶ್ವ ಡೇರಿ ಶೃಂಗ ಸಭೆ

Update: 2022-08-03 15:31 GMT

ಬೆಂಗಳೂರು, ಆ.3: ದೇಶದಲ್ಲಿ ಸೆ.12ರಿಂದ 15ರವರೆಗೂ ಅಂತರರಾಷ್ಟ್ರೀಯ ಡೇರಿ ಫೆಡರೇಷನ್‍ನ “ವಿಶ್ವ ಡೇರಿ ಶೃಂಗ ಸಭೆ” ನಡೆಯುತ್ತಿದ್ದು, ಇದರಲ್ಲಿ ಅಮೂಲ್ ಜೊತೆಗೆ ಕರ್ನಾಟಕ ಹಾಲು ಮಹಾಮಂಡಳಿಯೂ ಮುಖ್ಯ ಪ್ರಾಯೋಜಕತ್ವವನ್ನು ಪಡೆದುಕೊಂಡಿದೆ.

ಕರ್ನಾಟಕ ಹಾಲು ಮಹಾಮಂಡಳಿಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ 2ನೇ ಅತಿದೊಡ್ಡ ಸಹಕಾರಿ ಸಂಸ್ಥೆಯಾಗಿದ್ದು, ಕಳೆದ ನಾಲ್ಕೂವರೆ ದಶಕಗಳಿಂದ ಸಹಕಾರ ಚಳುವಳಿಯ ತತ್ವಗಳನ್ನು ಮೈಗೂಡಿಸಿಕೊಂಡು, ಗ್ರಾಮೀಣ ಹಾಲು ಉತ್ಪಾದಕರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗೆ ಶ್ರಮಿಸಿರುವುದಲ್ಲದೇ, ಗ್ರಾಮೀಣ ಉದ್ಯೋಗ ಮತ್ತು ಹಾಲು ಉತ್ಪಾದನೆಗೆ ಆದ್ಯತೆ ನೀಡಿರುತ್ತದೆ.

ಕರ್ನಾಟಕ ಹಾಲು ಮಹಾಮಂಡಳಿಯ(ಕೆಎಂಎಫ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಹೈನುಗಾರಿಕೆ ಕ್ಷೇತ್ರದಲ್ಲಿ ಅಗಾಧ ಜ್ಞಾನವನ್ನು ಹೊಂದಿದ್ದು, ಕೆಎಂಎಫ್ ಮುಂಬರುವ ಆರ್ಥಿಕ ವರ್ಷದಲ್ಲಿ ರೂ.30,000 ಕೋಟಿ ವಹಿವಾಟು ಸಾಧಿಸುವ ಗುರಿ ಹಮ್ಮಿಕೊಳ್ಳಲಾಗಿರುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News