ಬಾಗಲಕೋಟೆ ಜಿಲ್ಲಾದ್ಯಂತ ಹರ್ ಘರ್ ತಿರಂಗಾ ಅಭಿಯಾನ; ಧ್ವಜ ಮಾರಾಟಕ್ಕೆ ಡಿಸಿ ಸುನಿಲ್‍ಕುಮಾರ ಚಾಲನೆ

Update: 2022-08-03 16:08 GMT

ಬಾಗಲಕೋಟೆ: ಜಿಲ್ಲೆಯಾದ್ಯಂತ ಆಗಸ್ಟ್ 13 ರಿಂದ 15 ವರೆಗೆ ಹಮ್ಮಿಕೊಂಡ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸುವ ಹಿನ್ನಲೆಯಲ್ಲಿ ಧ್ವಜ ಮಾರಾಟಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಬುಧವಾರ ಚಾಲನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರ ಧ್ವಜ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರ ಭಕ್ತಿ, ರಾಷ್ಟ್ರ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರು ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಬೇಕು. ಸರಕಾರದಿಂದ ಈಗಾಗಲೇ ಕನ್ನಡ ಸಂಸ್ಕøತಿ ಇಲಾಖೆಗೆ 76 ಸಾವಿರ ಧ್ವಜಗಳು ಬಂದಿದ್ದು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು, ವಿವಿಧ ಇಲಾಖೆಯ ಅಧಿಕಾರಿಗಳು ಸಹ ಧ್ವಜಗಳನ್ನು ಖರೀದಿ ಮಾಡಿಕೊಳ್ಳಬೇಕು. ಒಂದು ಧ್ವಜಕ್ಕೆ 22 ರೂ.ಗಳನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಮಾತನಾಡಿ ಸ್ತ್ರೀಶಕ್ತಿ ಸಂಘ ಸಂಸ್ಥೆಗಳ ಮೂಲಕ 1 ಲಕ್ಷ ರಾಷ್ಟ್ರ ಧ್ವಜಗಳನ್ನು ತಯಾರಿಸಲಾಗಿದ್ದು, ಆಗಸ್ಟ 5 ರಿಂದ ಜಿಲ್ಲೆಯ 155 ಗ್ರಾಮ ಪಂಚಾಯತಿಗಳಲ್ಲಿ ಮಾರಾಟಕ್ಕೆ ಲಭ್ಯವಿರಲಿವೆ. ಗ್ರಾಮೀಣ ಪ್ರದೇಶದ ಜನರು ರಾಷ್ಟ್ರಧ್ವಜವನ್ನು ಖರೀದಿ ಮಾಡಿ ಮನೆ ಮೇಲೆ ಹಾರಿಸುವ ಮೂಲಕ ರಾಷ್ಟ್ರ ಭಕ್ತಿ ಮೆರೆಯಬೇಕು ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ ಹಕ್ಕರಕಿ, ಯುಕೆಪಿ ಮಹಾ ವ್ಯವಸ್ಥಾಪಕ ರಾಹುಲ್ ಪಾಂಡೆ, ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಇದೇ ಸಂದರ್ಭದಲ್ಲಿ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ನಾಗರತ್ನಾ ಅವರು 400 ಧ್ವಜಗಳನ್ನು ಖರೀದಿಸಿದರು. ಅಲ್ಲದೇ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಸಹ ಧ್ವಜಗಳನ್ನು ಖರೀದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News