ಆ.4ರಂದು ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

Update: 2022-08-03 16:11 GMT
ದ.ಕ. ಜಿಲ್ಲಾಧಿಕಾರಿ

ಸುಳ್ಯ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಳ್ಯ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ಆ.4ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಿಳಿಸಿದ್ದಾರೆ.

ಕಡಬ ಮತ್ತಿತರ ತಾಲೂಕುಗಳಿಗೆ ಸಂಬಂಧಿಸಿದಂತೆ ಆಯಾ ತಾಲೂಕಿನ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News