ಆ.4ರಂದು ವಕೀಲರ ಪ್ರತಿಭಟನೆ
Update: 2022-08-03 23:10 IST
ಮಂಗಳೂರು, ಆ.3: ಜನನ ಮತ್ತು ಮರಣ ನೋಂದಣಿ ಕಾಯ್ದೆಯಲ್ಲಿ ಜಾರಿಗೆ ತಂದಿರುವ ತಿದ್ದುಪಡಿಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರಕಾರಕ್ಕೆ ಸಲ್ಲಿಸಿದ ಮನವಿಗೆ ಯಾವುದೇ ಸ್ಪಂದನೆ ಸಿಗದ ಕಾರಣ ಆ.4ರಂದು ಅವಿಭಜಿತ ದ.ಕ. ಜಿಲ್ಲೆಯ ಎಲ್ಲಾ ವಕೀಲರು ಆಯಾ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳ ಆವರಣದಲ್ಲಿ ಪ್ರತಿಭಟನೆ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಆ.4ರಂದು ಬೆಳಗ್ಗೆ 10.30ರಿಂದ 1050ರವರೆಗೆ ದ.ಕ. ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪ್ರಥ್ವಿರಾಜ್ ರೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.