×
Ad

ಕನ್ನಡದ ಹಾಸ್ಯ ನಟ ಟೆನ್ನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ

Update: 2022-08-04 13:27 IST

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು. 

ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಕಾರ್ಯಕ್ರಮದಲ್ಲಿ ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು  ಟೆನ್ನಿಸ್ ​ಕೃಷ್ಣರನ್ನು ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು. 

'ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಡಳಿತ ಮೆಚ್ಚಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಅಧಿಕಾರಕ್ಕಾಗಿ ಪಕ್ಷಕ್ಕೆ ಸೇರದೇ ಸೇವೆಗಾಗಿ ಪಕ್ಷಕ್ಕೆ ಸೇರಿದ್ದೇನೆ' ಎಂದು  ಟೆನ್ನಿಸ್ ಕೃಷ್ಣ ಇದೇ ವೇಳೆ ತಿಳಿಸಿದರು. 

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಮೋಹನ್ ದಾಸರಿ, ಜಗದೀಶ್ ಸದಂ ಇತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News