ಬೆಳ್ತಂಗಡಿ: ಖಾಸಗಿ ಶಾಲೆಯ ಮಾಜಿ ಶಿಕ್ಷಕಿ ಆತ್ಮಹತ್ಯೆ

Update: 2022-08-04 10:23 GMT

ಬೆಳ್ತಂಗಡಿ: ಉಜಿರೆ ಖಾಸಗಿ ಶಾಲೆಯ ಮಾಜಿ ಶಿಕ್ಷಕಿ, ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ನಿವಾಸಿ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಮಹಿಳೆಯನ್ನು ಚೈತ್ರಾ ಅಡಿಗ ಎಂದು ಗುರುತಿಸಲಾಗಿದೆ. ಇವರು ಗುರುವಾರ ಮುಂಜಾನೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಚೈತ್ರಾ ಅವರು ಪತಿ ದೀಪಕ್ ಹಾಗೂ ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ. ಅವರು ಉಜಿರೆಯ ಖಾಸಗಿ ಶಾಲೆಯ ಮಾಜಿ ಶಿಕ್ಷಕಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News