ಬಿಬಿಎಂಪಿಯಿಂದ ಅಕ್ರಮ ರಸ್ತೆ ನಿರ್ಮಾಣ ಆರೋಪ: ಸಾಮಾಜಿಕ ಕಾರ್ಯಕರ್ತನ ವಿರುದ್ಧದ ಎಫ್‍ಐಆರ್ ಗೆ ಹೈಕೋರ್ಟ್ ತಡೆ

Update: 2022-08-04 13:17 GMT

ಬೆಂಗಳೂರು, ಆ.4: ಮಹದೇವಪುರ ವ್ಯಾಪ್ತಿಯ ಪಟ್ಟಂದೂರು ಅಗ್ರಹಾರ ಕೆರೆಯ ಬಫರ್ ವಲಯದಲ್ಲಿ ಬಿಬಿಎಂಪಿ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೇಸ್ ಸಂಬಂಧ ಸಾಮಾಜಿಕ ಕಾರ್ಯಕರ್ತ ಸಂದೀಪ್ ಅನಿರುದ್ಧನ್ ವಿರುದ್ಧ ದಾಖಲಾಗಿರುವ ಎಫ್‍ಐಆರ್‍ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಎಫ್‍ಐಆರ್ ರದ್ದು ಕೋರಿ ಸಂದೀಪ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಮಧ್ಯಂತರ ಆದೇಶ ನೀಡಿದೆ. ಪ್ರತಿವಾದಿಗಳಾದ ವೈಟ್‍ಫೀಲ್ಡ್ ಇನ್‍ಸ್ಪೆಕ್ಟರ್ ಹಾಗೂ ಮಹದೇವಪುರ ವಲಯದ ಕಾರ್ಯಕಾರಿ ಇಂಜಿನಿಯರ್‍ಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿದೆ. 

ಪಟ್ಟಂದೂರು ಅಗ್ರಹಾರ ಕೆರೆಯ ಬಫರ್ ಜೋನ್‍ನಲ್ಲಿ ಬಿಬಿಎಂಪಿ ಅಕ್ರಮವಾಗಿ ರಸ್ತೆ ನಿರ್ಮಿಸುತ್ತಿದೆ ಎಂದು ಸಂದೀಪ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಸಂದೀಪ್ ವಿರುದ್ಧ ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News