ಸಚಿವ ಅಶ್ವತ್ಥ್ ನಾರಾಯಣ್‍ ರ ಲೀಗಲ್ ನೋಟಿಸ್‍ ಗೆ ಹೆದರುವ ಪ್ರಶ್ನೆಯೇ ಇಲ್ಲ: ಆಪ್

Update: 2022-08-04 14:47 GMT

ಬೆಂಗಳೂರು, ಆ.4: ಕೈಗಾರಿಕಾತರಬೇತಿ ಕೇಂದ್ರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಟೂಲ್‍ಕಿಟ್ ವಿತರಣೆ ಹಗರಣ ಆರೋಪಕ್ಕೆ ಸಂಬಂಧಿಸಿ ಸಚಿವ ಅಶ್ವತ್ಥ್ ನಾರಾಯಣ್‍ ಅವರು ಕಳುಹಿಸಿರುವ ಲೀಗಲ್ ನೋಟಿಸ್‍ಗೆ ಹೆದರುವುದಿಲ್ಲ. ಸರಕಾರದ ಭ್ರಷ್ಟಾಚಾರದ ವಿರುದ್ಧ ಪಕ್ಷದ ಹೋರಾಟ ನಿರ್ಭೀತಿಯಿಂದ ಮುಂದುವರಿಯಲಿದೆ ಎಂದು ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್‍ದಾಸರಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದಅವರು, ‘13 ಸಾವಿರ ವಿದ್ಯಾರ್ಥಿಗಳಿಗೆ 22 ಕೋಟಿರೂಪಾಯಿ ವೆಚ್ಚದಲ್ಲಿಅಗತ್ಯ ಸಲಕರಣೆಗಳನ್ನು ಒಳಗೊಂಡ ಟೂಲ್ ಕಿಟ್‍ಗಳನ್ನು ಖರೀದಿಸುವ ಗುತ್ತಿಗೆಯಲ್ಲಿ ಭಾರೀ ಅಕ್ರಮ ನಡೆದಿರುವ ಕುರಿತು ದಾಖಲೆ ಸಹಿತ ಆರೋಪ ಮಾಡಿದ್ದೆವು.ಈ ಕುರಿತು ನ್ಯಾಯಾಂಗ ತನಿಖೆ ಆಗಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದೆವು.ಆದರೆ ಸರಕಾರವು ತನಿಖೆಗೆ ವಹಿಸದ ಕಾರಣ ಈ ಕುರಿತು ಲೋಕಾಯುಕ್ತರಿಗೆ ದೂರು ನೀಡಿದ್ದೆವು. ಸಚಿವ ಅಶ್ವತ್ಥ್ ನಾರಾಯಣ್‍ ಅವರು ನಮ್ಮ ಆರೋಪಗಳಿಗೆ ಸ್ಪಷ್ಟೀಕರಣ ನೀಡುವ ಬದಲು ಪಕ್ಷದ ಮುಖಂಡರಿಗೆ ವಕೀಲರಿಂದ ಲೀಗಲ್ ನೋಟಿಸ್ ಕಳುಹಿಸಿ ನಮ್ಮ ಬಾಯಿ ಮುಚ್ಚಿಸಲು ಯತ್ನಿಸಿದ್ದಾರೆ’ ಎಂದು ಹೇಳಿದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟಪಂಗಡಗಳ ವಿದ್ಯಾರ್ಥಿಗಳಿಗೆಸರಕಾರವುಅನ್ಯಾಯಮಾಡಿದೆ.ಟೆಂಡರ್ ನಲ್ಲಿ ದಅಕ್ರಮದಿಂದಾಗಿಅನುದಾನದದೊಡ್ಡ ಪಾಲು ಭ್ರಷ್ಟ ಸಚಿವರು ಹಾಗೂ ಗುತ್ತಿಗೆದಾರರಜೇಬು ಸೇರಿ, ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಉಪಕರಣಗಳು ಪೂರೈಕೆಯಾಗಲಿದೆ. ಭ್ರಷ್ಟಾಚಾರವನ್ನು ಪ್ರಶ್ನಿಸಿದ್ದಕ್ಕೆ 5 ಕೋಟಿರೂಪಾಯಿ ಪರಿಹಾರ ಕೇಳಿ ಸಚಿವಅಶ್ವತ್ಥ್ ನಾರಾಯಣ್ ನೋಟಿಸ್ ಕಳುಹಿಸಿರುವುದು ಹಾಗೂ ಅದನ್ನುಕಟ್ಟದಿದ್ದರೆ ಮಾನನಷ್ಟ ಮೊಕದ್ದಮೆದಾಖಲಿಸುವುದಾಗಿ ಬೆದರಿಕೆ ಹಾಕಿರುವುದುಖಂಡನೀಯ.

-ಡಾ. ವೆಂಕಟೇಶ್, ಎಎಪಿ ಮುಖಂಡ ಹಾಗೂ ಮಾಜಿ ಸಂಸದ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News